
ಯುವ ಚೇತನ ಬೈಕ್ ರ್ಯಾಲಿಗೆ ಚಾಲನೆ
ಬೆಂಗಳೂರು, ಸೆ. 28: ತಮಿಳುನಾಡಿನ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಶಿಕ್ಷೆಯಾಗಲು ಕರ್ನಾಟಕ ಕಾರಣ ವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿ ಸಿದ್ದಾರೆ.
ರವಿವಾರ ವಿಧಾನಸೌಧದ ಮುಂಭಾಗದಲ್ಲಿ ಕ್ರೀಡಾ ಇಲಾಖೆಯಿಂದ ಏರ್ಪಡಿಸಿದ್ದ ಯುವ ಚೇತನ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪನ್ನು ರಾಜ್ಯ ಸರಕಾರ ಪಾಲಿಸುತ್ತಿದೆ. ಇದರಲ್ಲಿ ಯಾರ ಕೈವಾಡವೂ ಇಲ್ಲ ಎಂದರು.
ಕೆಲ ಕಿಡಿಗೇಡಿಗಳು ವದಂತಿ ಹಬ್ಬಿಸಿ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಸರಿಯಲ್ಲ ಎಂದು ಆಕ್ಷೇಪಿಸಿದ ಸಿದ್ದರಾ ಮಯ್ಯ, ಸುಳ್ಳು ಸುದ್ದಿಗಳಿಗೆ ಜನತೆ ಯಾವುದೇ ಕಾರಣಕ್ಕೂ ಕಿವಿಗೊಡಬಾರದು ಎಂದು ಇದೇ ಸಂದರ್ಭದಲ್ಲಿ ಸಾರ್ವ ಜನಿಕರಲ್ಲಿ ಮನವಿ ಮಾಡಿದರು.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ತಪ್ಪಿತಸ್ಥೆಯೆಂದು ನ್ಯಾಯಾ ಲಯದಲ್ಲಿ ಸಾಬೀತಾಗಿದೆ. ಇದಕ್ಕೆ ಯಾರೂ ಹೊಣೆಯಲ್ಲ. ಕರ್ನಾಟಕ ರಾಜ್ಯ ಅಥವಾ ರಾಜ್ಯ ಸರಕಾರವನ್ನು ದೂರುವು ದರಲ್ಲಿ ಅರ್ಥವಿಲ್ಲ. ಮುಗ್ಧ್ದ ಜನರಿಗೆ ತಪ್ಪು ಮಾಹಿತಿ ನೀಡು ವುದು ಅಕ್ಷಮ್ಯ ಎಂದು ಹೇಳಿದರು.
ಮುಖ್ಯಮಂತ್ರಿಯೊಬ್ಬರು ಭ್ರಷ್ಟಾಚಾರ ಆರೋಪದಡಿ ಶಿಕ್ಷೆಗೆ ಗುರಿಯಾಗಿದ್ದಾರೆ ಈ ಬಗ್ಗೆ ನಿಮ್ಮ ಅಭಿಪ್ರಾಯವೇನೆಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಸಿದ್ದರಾಮಯ್ಯ ನಿರಾಕರಿಸಿದರು. ಜಯಲಲಿತಾ ತಪ್ಪು ಮಾಡಿದ್ದು ಅವರಿಗೆ ನ್ಯಾ ಯಾಲಯ ಶಿಕ್ಷೆ ವಿಧಿಸಿದೆ ಎಂದರು.
ಯುವ ಚೇತನ ಬೈಕ್ ರ್ಯಾಲಿ ಶಾಂತಿ, ಸಮಾನತೆ, ಸಹಭಾಳ್ವೆಗಾಗಿ ಬೆಂಗಳೂರಿನಿಂದ ಮೈಸೂರಿಗೆ ತೆರಳಲಿದೆ. ಸುಮಾರು 150ಕ್ಕೂ ಹೆಚ್ಚು ಮಂದಿ ಬೈಕ್ ಸವಾರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಚಿವ ಅಭಯಚಂದ್ರ ಜೈನ್, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ದಿನೇಶ್ ಗುಂಡೂರಾವ್, ಶಾಸಕ ಅಲ್ಲಮ ಪ್ರಭು ಪಾಟೀಲ್ ಹಾಜರಿದ್ದರು.