ಹೊಸದಿಲ್ಲಿ, ಅ. 13: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಅಕ್ಟೋಬರ್ 17ಕ್ಕೆ ಮುಂದೂಡಿದೆ.
ಜಯಾಲಲಿತಾ ಪರ ವಕೀಲ ಪಾಲಿ ನಾರಿಮನ್ ಶೀಘ್ರ ವಿಚಾರಣೆ ನಡೆಸುವಂತೆ ನ್ಯಾಯಾಪೀಠಕ್ಕೆ ಮನವಿ ಸಲ್ಲಿಸಿದ್ದರು. ಜಯಲಲಿತಾಗೆ ಕರ್ನಾಟಕದ ಹೈಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಜಯಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ತಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಹಿರಿಯ ಪ್ರಜೆ ಮತ್ತು ಮಹಿಳೆ ಎಂಬ ಆಧಾರದ ಮೇಲೆ ತನಗೆ ಜಾಮೀನು ನೀಡಬೇಕು ಎಂದು ಅರ್ಜಿಯಲ್ಲಿ ಜಯಾಲಲಿತಾ ಮನವಿ ಮಾಡಿಕೊಂಡಿದ್ದಾರೆ.
