ಕರಾವಳಿ

ದೋಣಿ ದುರಂತ ಪರಿಶೀಲನೆ: ಗಂಗೊಳ್ಳಿಗೆ ಬಂದರಿಗೆ ಉಪವಿಭಾಗಾಧಿಕಾರಿ ಭೇಟಿ

Pinterest LinkedIn Tumblr

ಕುಂದಾಪುರ: ಕುಂದಾಪುರದ ಉಪವಿಭಾಗಾಧಿಕಾರಿ ಚಾರುಲತಾ  ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Kundapura_assistant commissioner_visit_Gangolli

ಗಂಗೊಳ್ಳಿ ಅಳಿವೆಯಲ್ಲಿ ಸಂಭವಿಸುತ್ತಿರುವ ದೋಣಿ, ಬೋಟು ದುರಂತಗಳ ಬಗ್ಗೆ ಸ್ಥಳೀಯ ಮೀನುಗಾರರಿಂದ ಮಾಹಿತಿ ಪಡೆದುಕೊಂಡ ಅವರು, ಮೀನುಗಾರರ ವಿವಿಧ ಸಮಸ್ಯೆಗಳನ್ನು ಆಲಿಸಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪ್ರದೇಶ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದ ಅವರು, ಅಳಿವೆಯಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕೈಗೊಳ್ಳಬೇಕಾದ ಅಗತ್ಯ ತುರ್ತು ಸೇವೆಗಳ ಮತ್ತು ಕರಾವಳಿ ಕಾವಲು ಪೊಲೀಸ್ ಠಾಣೆಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಹಾಗೂ ಸಿಬ್ಬಂದಿ ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡುವುದಾಗಿ ಅವರು ಭರವಸೆ ನೀಡಿದರು.

ಕಂದಾಯ ಅಧಿಕಾರಿ ಅಶೋಕಕುಮಾರ್, ಗಂಗೊಳ್ಳಿ ಗ್ರಾಮಕರಣಿಕ ರಾಘವೇಂದ್ರ ದೇವಾಡಿಗ, ಹೆಮ್ಮಾಡಿ ಗ್ರಾಮಕರಣಿಕ ರವಿಶಂಕರ, ಮೀನುಗಾರಿಕೆ ಇಲಾಖೆಯ ಗೋಪಾಲಕೃಷ್ಣ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

Write A Comment