ಮಂಗಳೂರು,ನ.24 : ಸ್ಕೂಟರ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ನಲ್ಲಿದ್ದ 8ವರ್ಷದ ಬಾಲಕಿ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ರವಿವಾರ ರಾತ್ರಿ ನಗರದ ಅಳಕೆ ಬಳಿ ಸಂಭವಿಸಿದೆ. ಮಣ್ಣಗುಡ್ಡೆಯ ರಚನಾ ಪೈ ಎಂಬಾಕೆ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿ ಬಾಲೆ.
ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಕೂಟರ್ನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್ಗೆ ಲಾರಿ ಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಬಾಲಕಿಗೆ ತೀವ್ರಗಾಯಗೊಂಡಿದ್ದರಿಂದ ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾರೆ.ಉಳಿದವರು ಸಣ್ಣ ಪುಟ್ಟ ಗಾಯಗಳಾಗಿದೆ.
