ಕನ್ನಡ ವಾರ್ತೆಗಳು

ವಿಜಯನಾಥ ವಿಠಲ ಶೆಟ್ಟಿ ಕಾಂಗ್ರೆಸಿಗನಲ್ಲ : ಸಚಿವ ರೈ ಸ್ಪಷ್ಟನೆ

Pinterest LinkedIn Tumblr

ಮಂಗಳೂರು :ವಿಜಯನಾಥ ವಿಠಲ ಶೆಟ್ಟಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಅಲ್ಲ ಎಂದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಇತ್ತೀಚಿಗೆ ಹಿಂದೂ ಸಮಾಜೋತ್ಸವದ ಅಧ್ಯಕ್ಷ ಸ್ಥಾನ ವಹಿಸುವ ಮೂಲಕ ಸುದ್ಧಿಯಾಗಿರುವ ಕಾಂಗ್ರೆಸ್ ಮುಖಂಡ ವಿಜಯನಾಥ ವಿಠಲ ಶೆಟ್ಟಿ ಬಗ್ಗೆ ನಿಮ್ಮ ನಿಲುವು ಏನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಲ್ಲಿ ಲಕ್ಷಾಂತರ ಮಂದಿ ಇರುತ್ತಾರೆ. ಅದರಲ್ಲಿ ಅಧ್ಯಕ್ಷ ಸ್ಥಾನ ಸಿಕ್ಕರೆ ಎಲ್ಲಿ ಬೇಕಾದರೂ ಹೋಗುವವರಿರುತ್ತಾರೆ ಅಂತಹವರಲ್ಲಿ ವಿಜಯನಾಥ ವಿಠಲ ಶೆಟ್ಟಿಯು ಒಬ್ಬರು ಎಂದು ಹೇಳಿದರು.

ನಗರದಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದ ಬಗ್ಗೆ ಮಾತನಾಡಿದ ಅವರು, ಮತೀಯವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಮಾರಸ್ಯಕ್ಕೆ ಧಕ್ಕೆ ತರುವವರ ವಿರುದ್ಧ ಶಿಸ್ತು ಕ್ರಮ ಜರಗಿಸುವ ಅವಶ್ಯಕತೆ ಇದೆ. ಉಪ್ಪಿನಂಗಡಿಯಲ್ಲಿ ನಡೆದ ಘಟನೆಗೆ ಇಂತಹದೇ ಕಾರ್ಯಕ್ರಮದ ಪ್ರಚೋದನಕಾರಿ ಭಾಷಣವೇ ಕಾರಣ ಎಂಬುದು ಎಲ್ಲರಿಗೂ ತಿಳಿದಿದ್ದು, ನಗರದಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುವುದು ಎಂದರು.

ಕೋಮುವಾದಿಗಳು ಸೃಷ್ಟಿಸುವ ಗಲಭೆಗಳಿಗೆ ಅಮಾಯಕರೇ ಬಲಿಪಶುಗಳಾಗುತ್ತಿದ್ದಾರೆ. ಕಾರ್ಯಕ್ರಮದ ಬಳಿಕ ಉಂಟಾಗುವ ಅವಘಡಗಳಿಗೆ ಕಾರ್ಯಕ್ರಮ ಸಂಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಮಾ.1ರಂದು ನಗರದಲ್ಲಿ ನಡೆಯುವ ಹಿಂದೂ ಸಮಾಜೋತ್ಸವದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗವುದು ಎಂದರು.

ಶಾಸಕ ಮೊಯ್ದೀನ್ ಬಾವಾ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಮಿಥುನ್ ರೈ, ವಿಶ್ವಾಸ್ ದಾಸ್, ಮಿಲ್ವಿನ್ ಮುಂತಾದವರು ಜೊತೆಗಿದ್ದರು.

Write A Comment