(ಸಾಂಧರ್ಬಿಕ ಚಿತ್ರ) ಮಂಗಳೂರು, ಎ.02 : ತೊಕ್ಕೊಟು-ಪಂಪ್ವೆಲ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗುತ್ತಿರುವ ಸಂಚಾರ ಸಮಸ್ಯೆಗಳನ್ನು ಕೂಡಲೇ ಸರಿಪಡಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಎನ್ಎಚ್ಎಐ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೆದ್ದಾರಿ ಸಮಸ್ಯೆಗಳ ಬಗ್ಗೆ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೊಕ್ಕೊಟು ಜಂಕ್ಷನ್ನಲ್ಲಿ ಸರ್ವಿಸ್ ರಸ್ತೆಗಳನ್ನು ಒಂದು ವಾರದೊಳಗೆ ಪೂರ್ತಿಗೊಳಿಸಬೇಕು. ಜಂಕ್ಷನ್ನಲ್ಲಿ ಮೇಲ್ಸೇತುವೆ ಕಾಮಗಾರಿ ತ್ವರಿತಗೊಳಿಸಬೇಕು ಎಂದು ಸೂಚಿಸಿದರು.
ಶಾಸಕ ಜೆ.ಆರ್.ಲೋಬೊ ಮಾತನಾಡಿ, ನಂತೂರು ಜಂಕ್ಷನ್ ಅಭಿವೃದ್ಧಿ ಮತ್ತು ಬಿಕರ್ನಕಟ್ಟೆಯಲ್ಲಿ ಕಿರಿದಾಗಿರುವ ಹೆದ್ದಾರಿಯ ವಿಸ್ತರಣೆ ಕೈಗೆತ್ತಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಎನ್ಎಚ್ಎಐ ಅಧಿಕಾರಿ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.
