ಮಂಗಳೂರು,ಮೇ.16 : ಉಳ್ಳಾಲ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆಯಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಮೆಸ್ಕಾಂ ಉದ್ಯೋಗಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೃತ ಪಟ್ಟವರು ಕುಂಜತ್‌ಬೈಲ್ ನಿವಾಸಿ ಕೊರಗಪ್ಪ(50) ಅವರು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಲಿದು ಬಂದಿದೆ. ಉದ್ಯೋಗದ ನಿಮಿತ್ತ ಕಚೇರಿಗೆ ಬಂದ ಅವರು ಮಧ್ಯಾಹ್ನದ ವೇಳೆಗೆ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.
