ಹುಬ್ಬಳ್ಳಿ, ಮೇ 25: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೋದರ ಸಂಬಂಧಿಗಳಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿರುವ ಧಾರುಣ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬೊಮ್ಮಸಂಧ್ರ ಗ್ರಾಮದಲ್ಲಿ ಸಂಭವಿಸಿದೆ.
ಬೊಮ್ಮಸಂಧ್ರದ ಸಿದ್ದನಗೌಡ ಪಾಟೀಲ್ (40) ಹಾಗೂ ಶಂಕ್ರಪ್ಪ ಲಂಡೇನವರ್ (50) ಎಂಬುವವರು ಕೊಲೆಯಾಗಿದ್ದಾರೆ. ಇವರೀರ್ವರು ಹೊಲದಿಂದ ಮನೆಗೆ ವಾಪಾಸಾಗುತ್ತಿದ್ದಾಗ ದುಷ್ಕರ್ಮಿಗಳು ಇವರನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ಧಿ ತಿಳಿಯುತ್ತಲೇ ಕೊಲೆ ನಡೆದ ಸ್ಥಳಕ್ಕೆ ಧಾವಿಸಿದ ಮೃತರ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿತ್ತು. ಕೊಲೆ ಮಾಡಿದವರು ಯಾರೇ ಇರಲಿ ಅವರನ್ನು ಶಿಕ್ಷಿಸಬೇಕೆಂದು ಪೊಲೀಸರಲ್ಲಿ ಕುಟುಂಬ ವರ್ಗದವರು ಮನವಿ ಮಾಡಿಕೊಂಡಿದ್ದಾರೆ. ಆಸ್ತಿ ವಿವಾದವೇ ಈ ಕೊಲೆಗೆ ಕಾರಣವೆಂದು ಹೇಳಲಾಗಿದ್ದು, ಪರಾರಿಯಾದ ಆರೋಪಿಗಳ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
