ನವದೆಹಲಿ, ಜೂ.10: ಹಲಿ ಜಲಮಂಡಳಿಯ ಅಧ್ಯಕ್ಷ ಕಪಿಲ್ ಮಿಶ್ರಾ ಅವರನ್ನು ದೆಹಲಿಯ ನೂತನ ಕಾನೂನು ಮಂತ್ರಿಯನ್ನಾಗಿ ನೇಮಕ ಮಾಡಲಾಗಿದೆ.
ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ನಿವಾಸದ ಎದುರು ನಡೆಸಿದ ಪ್ರತಿಭಟನೆ ಹಿಂಸಾರೂಪ ತಾಳಿದ್ದರಿಂದ ಪೊಲೀಸರು ಜಲಫಿರಂಗಿಗಳನ್ನು ಪ್ರಯೋಗಿಸಬೇಕಾಯಿತು.
ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ಅವರಿಗೆ ತೋಮರ್ ಒಬ್ಬ ಭ್ರಷ್ಟ ಎಂದು ಗೊತ್ತಿರಲಿಲ್ಲವೇ ಎಂದು ಕೇಂದ್ರ ಪರಿಸರ ಮಂತ್ರಿ ಪ್ರಕಾಶ್ ಜಾವಡೇಕರ್ ಪ್ರಶ್ನಿಸಿದ್ದಾರೆ.
