ಕರ್ನಾಟಕ

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮರು ಮೌಲ್ಯಮಾಪನ : 19ಕ್ಕೆ ಸಂಪೂರ್ಣ ಫಲಿತಾಂಶ

Pinterest LinkedIn Tumblr

Karnataka Minister for Primary and Secondary Education, Kimmane

ಬೆಂಗಳೂರು, ಜೂ.13: ಈಗಾಗಲೇ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಇಂದಿಲ್ಲಿ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಜೂ.15ರಂದು, ದ್ವಿತೀಯ ಹಂತದಲ್ಲಿ ಜೂ.17 ಹಾಗೂ ಅಂತಿಮವಾಗಿ ಜೂ.19ರಂದು ಸಂಪೂರ್ಣವಾಗಿ ಫಲಿತಾಂಶಗಳು ಸಿಗಲಿವೆ. ಈಗಾಗಲೇ 30 ಸಾವಿರ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಮುಕ್ತಾಯಗೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯ ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಪೂರ್ಣಗೊಂಡಿದೆ. ಇನ್ನು ಬೆಳಗಾವಿ ಹಾಗೂ ಗುಲ್ಬರ್ಗದಲ್ಲಿ ವಿತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಇನ್ನು ಜುಲೈ 15ರೊಳಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್‌ಗಳನ್ನು ವಿತರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಅವಧಿ ವಿಸ್ತರಣೆ: ಪಿಯು ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕ್ರಿಯೆ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಜೂ.30ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವರ ಸಮರ್ಥನೆ: ಹಗಲು-ರಾತ್ರಿ ನಿದ್ದೆಗೆಟ್ಟು ಕೆಲಸ ಮಾಡಿದ್ದೇನೆ. ಸರ್ಕಾರಕ್ಕೆ ಒಳ್ಳೆಯ ಹೆಸರು ತಂದು ಕೊಟ್ಟಿದ್ದೇನೆ. ಹೀಗಿರುವಾಗ ಕೆಲವರು ನನ್ನ ವಿರುದ್ಧ ಇಲ್ಲಸಲ್ಲದ ಆಪಾದನೆಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೌಲ್ಯಮಾಪನ ನಡೆಸಲಾಗಿದೆ. ನನ್ನನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಊಹಾಪೋಹ ಮಾತುಗಳು ಹರಿದಾಡುತ್ತಿವೆ. ಆದರೆ ಇವೆಲ್ಲ ಸತ್ಯಕ್ಕೆ ದೂರವಾದವು. ನಾನು ಅಧಿಕಾರ ವಹಿಸಿಕೊಂಡ ನಂತರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಫಲಿತಾಂಶ ಬಂದಿದೆ. ಪಾರದರ್ಶಕವಾಗಿ ಎಲ್ಲ ಯೋಜನೆಗಳು ಮಕ್ಕಳಿಗೆ ತಲುಪುತ್ತಿವೆ. ಉತ್ತಮ ಕೆಲಸ ಮಾಡುತ್ತಿದ್ದೇನೆ ಎಂದು ಕಿಮ್ಮನೆ ರತ್ನಾಕರ್ ಸಮರ್ಥಿಸಿಕೊಂಡಿದ್ದಾರೆ.

Write A Comment