ಕನ್ನಡ ವಾರ್ತೆಗಳು

ಕಾಂಗ್ರೆಸ್ ಸಮಿತಿ ವತಿಯಿಂದ ಜೆಪ್ಪು ಮಹಾಕಾಳಿ ಪಡ್ಪು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ.

Pinterest LinkedIn Tumblr

mahakali_padpu_photo

ಮಂಗಳೂರು,ಜೂನ್.16: ಮಂಗಳೂರು ದಕ್ಷಿಣ ವಿಧಾನಸಭಾ ಯುವ ಕಾಂಗ್ರೆಸ್ ಹಾಗೂ ಅತ್ತಾವರ ವಾರ್ಡ್ ಕಾಂಗ್ರೆಸ್ ಸಮಿತಿ ವತಿಯಿಂದ ಜೆಪ್ಪು ಮಹಾಕಾಳಿಪಡ್ಪು ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಸೋಮವಾರ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಕೊಡೆ ಹಾಗೂ ಬ್ಯಾಗ್‌ಗಳನ್ನು ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕ್ರಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀ ಮಿಥುನ್ ರೈಯವರು ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸಿ, ಅವರನ್ನು ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ದೊರಕಿಸಿಕೊಡುವಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಆದುದರಿಂದ ಶಿಕ್ಷಕರ ಸೇವೆ ಅವಿಸ್ಮರಣೀಯ ಎಂದರು.

ಪ್ರಾಸ್ತಾವಿಕವಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಕೆ. ಸುಧೀರ್ ಮಾತನಾಡುತ್ತಾ ಕಳೆದ 10 ವರ್ಷಗಳಿಂದ ಈ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ನೀಡುತ್ತಿರುವುದರಿಂದ ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಆರ್ಥಿಕವಾಗಿ ಹಿಂದುಳಿದ ಅವರ ಹೆತ್ತವರಿಗೆ ಪ್ರಯೋಜನಕಾರಿಯಾಗಲಿದೆ ಎಂದರು.

ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ನಾಗೇಂದ್ರ ಕುಮಾರ್, ಕಾರ್ಪೋರೇಟರ್ ಶೈಲಜಾರವರು ಸಂದೋರ್ಬೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮೆರಿಲ್ ರೇಗೋ, ರಮಾನಂದ ಪೂಜಾರಿ, ಸುಹೈಲ್ ಕಂದಕ್, ಮೊಹಮದ್ ನವಾಜ್, ಸದಾಶಿವ ಅಮೀನ್, ವಿಜಯಲಕ್ಷ್ಮೀ, ದುರ್ಗಾಪ್ರಸಾದ್, ಅಬೂಬಕರ್, ಗೋಪಾಲಕೃಷ್ಣ ಶೆಟ್ಟಿ, ಗೀತಾ ಅತ್ತಾವರ, ವಸಂತ, ಲತೀಫ್ ಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ ಮೊದಲಾದವರು ಉಪಸ್ಥಿತರಿದ್ದರು.

Write A Comment