ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನ್ ಗ್ರಾಮೀಣ ಮೇಳ” ನಗರದ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೋ ಅವರು ಈ ಮೇಳವನ್ನು ಉದ್ಘಾಟಿಸಿ, ಶುಭಾ ಹಾರೈಸಿದರು. ಮೇಳದ ಸಂಘಟಕರಾದ ಶ್ರೀ ಮಹಾವೀರ್, ದಿನೇಶ್ ಶರ್ಮಾ ಹಾಗೂ ಕಾಂಗ್ರೆಸ್ ಮುಖಂಡರಾದ ಟಿ.ಕೆ.ಸುಧೀರ್, ರಮಾನಂದ ಪೂಜಾರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜುಲೈ 5ರವರೆಗೆ ಈ ಗ್ರಾಮೀಣ ಮೇಳ ನಡೆಯಲಿದ್ದು, ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓರಿಸ್ಸಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್ಶೀಟ್, ಹಾಗೂ ಸೋಫಾಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್ಶೀಟ್ಗಳು ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿರುವುದು.
{RAJASTHAN : Block Print. Dress Material, Suit, Top, Bed Sheets, Sanganeri Saree, KOLKATA :Kantha Work,Pashmina,Dhopian, Baluchary, Boutique,Silk Saree. CHHATTISGARH: Tussara, Matka & Silk Saree. ANDHARA PRADESH : Mangalgiri, Kalamakari, Mangalgiri saree, Dress Material, Top, Cotton Soft Dress Material, UTTAR PRADESH : Banaras, Zamadani, Bed Sheet & Cushion Cover, Silk Sareee, Dress Material, MADHYA PRADESH :Chanderi, Maheswari Silk Saree, Bagh Print Cotton Work, BIHAR : Tussar Silk Saree, Dress Material & Khadi Silk. GUJARAT : Kachh Bandhini Dress Material, Cotton Work, Patola & Rajkot Silk Saree & Much More Products }
ಮಾತ್ರವಲ್ಲದೇ ಜೋಧ್ಪುರ್ ಕರಕುಶಲ ಮರದ ಪಿಠೋಪರಣಗಳು, ಸಾರಂಗ್ಪುರ್ ಮರದ ಪಿಠೋಪರಣಗಳು, ಹೈದಾರ್ಬಾದ್ ಕಪ್ಪು ಮೇಟಲ್ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕಾರಿ ಐಟಮ್ ಗಳ ಬೃಹತ್ ಸಂಗ್ರಹ ಇಲ್ಲಿವೆ ಎಂದು ಮೇಳದ ಸಂಘಟಕರಾದ ಶ್ರೀ ಮಹಾವೀರ್ ಹಾಗೂ ದಿನೇಶ್ ಶರ್ಮಾ ತಿಳಿಸಿದ್ದಾರೆ.




















































