ಕರ್ನಾಟಕ

ರೈತರ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ, ಪರಿಹರಿಸಲು ಸರ್ಕಾರ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

Pinterest LinkedIn Tumblr

amara

ಬೆಂಗಳೂರು, ಜೂ. 27: ರೈತರ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಾವುದೇ ರೈತರು ಆತ್ಮಹತ್ಯೆಗೆ ಮುಂದಾಗಬಾರದು ಎಂದು ಮನವಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರ ಸಮಸ್ಯೆಗಳಿಗೆ ಸರ್ಕಾರ ಪರಿಹಾರ ರೂಪಿಸಲಿದೆ ಎಂದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿಂದು ಬೆಂಗಳೂರಿನಿಂದ ಅಮರನಾಥಗೆ ಯಾತ್ರೆ ಕೈಗೊಂಡಿರುವ ಯಾತ್ರಾರ್ಥಿಗಳ ತಂಡಕ್ಕೆ ಶುಭಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ದೂರಿದ ಅವರು, ಈ ಹಿಂದೆಯೂ ರೈತರ ಆತ್ಮಹತ್ಯೆ ಘಟನೆಗಳು ಆಗಿವೆ. ತಮ್ಮ ಸರ್ಕಾರ ಮಾತ್ರ ರೈತರ ಆತ್ಮಹತ್ಯೆಗೆ ಹೊಣೆ ಎಂಬ ಮಾತುಗಳು ಸರಿಯಲ್ಲ ಎಂದರು.

ಈ ಹಿಂದೆ ಸಹ ಬೆಲೆ ಕುಸಿದಾಗ ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ನಡೆದಿವೆ. ಆತ್ಮಹತ್ಯೆಗಳಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು ಎಂದರು.

ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಸರ್ಕಾರ ಮುಂದಾಗಿದೆ. ಈಗಾಗಲೇ ಕಾರ್ಖಾನೆಗಳಲ್ಲಿ ಇದ್ದ ಸಕ್ಕರೆಯನ್ನು ಜಫ್ತಿ ಮಾಡುವ ಮೂಲಕ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.

Write A Comment