ಕರ್ನಾಟಕ

ಮಂಡ್ಯದಲ್ಲಿ ಮತ್ತೋರ್ವ ರೈತ ಆತ್ಮಹತ್ಯೆ: ಜಿಲ್ಲೆಯಲ್ಲಿಯೇ ನಾಲ್ವರ ಆತ್ಮಹತ್ಯೆ ?!

Pinterest LinkedIn Tumblr

manಮಂಡ್ಯ: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಜಿಲ್ಲೆಯಲ್ಲಿ ಇಂದು ಮತ್ತೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಜಿಲ್ಲೆವೊಂದರಲ್ಲಿಯೇ ನಾಲ್ವರು ಆತ್ಮಹತ್ಯೆಗೆ ಶರಣಾದಂತಾಗಿದೆ.

ಮೃತ ರೈತನನ್ನು ಶಂಕರೇಗೌಡ(40) ಎಂದು ಹೇಳಲಾಗಿದ್ದು, ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹಿರಿಕಳಲೆ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ: ಮೃತ ರೈತನಿಗೆ 3 ಎಕರೆ ಜಮೀನಿದ್ದು, ನಾಲ್ಕು ಲಕ್ಷ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಸಾಲ ತೀರಿಸಲಾಗದೆ ಮನನೊಂದ ಈತ, ಇಂದು ಬೆಳಗ್ಗೆ ತನ್ನದೇ ಜಮೀನಿಗೆ ತೆರಳಿ ಅಲ್ಲಿಯೇ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇನ್ನು ಈ ಹಿಂದೆ ಇದೇ ಜಿಲ್ಲೆಯಲ್ಲಿ ಮಹೇಶ್, ಬಸವರಾಜ್ ಹಾಗೂ ನಿಂಗೇಗೌಡ ಎಂಬ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.

Write A Comment