ಉಡುಪಿ: ಬೈಕ್ ಹಾಗೂ ಮೀನು ಸಾಗಣಿಕೆಯ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ಕಾಪು ಸಮೀಪದ ಮೂಳೂರು ಸಮೀಪ ನಡೆದಿದೆ.
ಮೃತ ದುರ್ದೈವಿಗಳನ್ನುಭದ್ರಾವತಿ ಮೂಲದವರಾದ ನಾಗರಾಜ (27) ಮತ್ತು ಕುಮಾರ್ (25) ಎಂದು ಗುರುತಿಸಲಾಗಿದೆ.
ಮೀನು ಸಾಗಾಟದ ಲಾರಿ ಮಂಗಳೂರು-ಉಡುಪಿ ಮಧ್ಯೆ ಸಂಚರಿಸುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

