ಇತ್ತೀಚೆಗೆ ವಿಮಾನ ಅವಘಡಗಳು ಹೆಚ್ಚುತ್ತಿದ್ದು ಲಘು ವಿಮಾನವೊಂದು ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಟೋಕಿಯೋದ ಚೊಫು ವಿಮಾನ ನಿಲ್ದಾಣದಿಂದ ಹೊರಟಿದ್ದ ಐದು ಆಸನಗಳ ಲಘು ವಿಮಾನ ಸ್ಥಳೀಯ ಕಾಲಮಾನ ಬೆಳಿಗ್ಗೆ 11 ರ ಸುಮಾರಿಗೆ ಇಲ್ಲಿನ ಜನವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಕೆಳಗಡೆ ಬಿದ್ದಿದ್ದು ತಕ್ಷಣ ಹಲವಾರು ಕಟ್ಟಡಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದು ಐದು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಮಾನದಲ್ಲಿದ್ದ ನಾಲ್ವರ ಪೈಕಿ ಮೂವರು ಬದುಕುಳಿದಿದ್ದು ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.