ರಾಷ್ಟ್ರೀಯ

ಇಬ್ಬರು ಪೊಲೀಸರಿಂದ ಮಹಿಳೆಯ ಮೇಲೆ ಗ್ಯಾಂಗ್ ರೇಪ್ !

Pinterest LinkedIn Tumblr

6304GANG RAPEಪೊಲೀಸರ ಬಂಧನದಲ್ಲಿರುವ ತನ್ನ ಪತಿಯನ್ನು ಬಿಡುಗಡೆ ಮಾಡಿ ಎಂದು ಪೊಲೀಸ್ ಠಾಣೆಗೆ ಹೋದ ಮಹಿಳೆಯನ್ನು ಇಬ್ಬರು ಪೊಲೀಸರು ಸೇರಿ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.

ಇಲ್ಲಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು ಮಹಿಳೆಯ ಪತಿಯನ್ನು ಕಳ್ಳ ಭಟ್ಟಿ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರು ಬಂಧನದಲ್ಲಿ ಇರಿಸಿದ್ದರು.ಈ ಹಿನ್ನೆಲೆಯಲ್ಲಿ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದಳು. ಈ ಸಮಯದಲ್ಲಿ ಅಲ್ಲಿದ್ದ ವಿಕಾಸ್ ತ್ಯಾಗಿ ಹಾಗೂ ಜೀತೇಂದ್ರ ಚಂದೇಲ್ ಎಂಬ ಇಬ್ಬರು ಕಾಮುಕ ಪೇದೆಗಳು ಮಹಿಳೆಯನ್ನು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ .

ಈ ಕುರಿತು ನೊಂದ ಮಹಿಳೆ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಗಳು ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Write A Comment