ಪಾಟ್ನಾ, ಆ.6: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಗುಂಡಿಟ್ಟು ಕೊಂದಿರುವ ಘಟನೆ ನಿನ್ನೆ ಸಲೀಂಪುರದ ಅಹ್ರಾ ಪ್ರದೇಶದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಅವಿನಾಶ್ ಕುಮಾರ್ ಎಂದು ಗುರುತಿಸಲಾಗಿದೆ. ಮನೆಯಿಂದ ಟೀ ಕುಡಿಯಲು ಹೋಟೆಲ್‌ವೊಂದಕ್ಕೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ.
ಮೂವರು ವ್ಯಕ್ತಿಗಳು ಅವಿನಾಶ್ ಕುಮಾರ್‌ನನ್ನು ಕೊಂದ ಬಗ್ಗೆ ಸಿಸಿಟಿವಿ ದೃಶ್ಯಗಳಿಂದ ತಿಳಿದು ಬಂದಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ಶೋಧಕಾರ್ಯ ಆರಂಭಿಸಿದ್ದಾರೆ.
ಬಿಹಾರದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸ್ಥಳದಲ್ಲಿ ಬಿಗಿ ಭದ್ರತೆಯ ವ್ಯವಸ್ಥೆ ಕೈಗೊಳ್ಳಲಾಗಿದೆ.
https://youtu.be/F1Ue8U8fQqU
