ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ, ಕಳೆದ 2 ತಿಂಗಳಿನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಷೇತ್ರದಲ್ಲಿ 90,000 ಕೋಟಿ ರೂಪಾಯಿಗಳ ಬಂಡವಾಳ ಹರಿದು ಬಂದಿದ್ದು ಆ ಮೂಲಕ ‘ಮೋದಿ ಚಿಂತನೆ’ ಫಲ ನೀಡುವ ಆಶಾಭಾವನೆ ಗೋಚರಿಸಿದೆ.
ಈಗಾಗಲೇ ಹಲವು ಸ್ಥಳೀಯ ಮತ್ತು ವಿದೇಶಿ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಇವುಗಳಲ್ಲಿ ಹೆಚ್ಚಿನ ಪಾಲು ಭಾರತದಲ್ಲಿಯೇ ಸ್ಮಾರ್ಟ್‌ಫೋನ್‌ಗಳನ್ನು ಉತ್ಪಾದಿಸುವ ಉದ್ದೇಶವನ್ನು ಹೊಂದಿವೆ. ಅಲ್ಲದೇ ಭಾರತ ವಿಶ್ವದಲ್ಲೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಸ್ಮಾರ್ಟ್‌ಫೋನ್ ಮಾರುಕಟ್ಟೆ ಎನಿಸಿದ್ದು, ಈಗ ಫೋನ್‌ಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಷ್ಟ್ರದತ್ತ ಹೆಜ್ಜೆ ಹಾಕಲು ಕಂಪನಿಗಳು ಮುಂದಾಗಿವೆ.
ಇಲೆಕ್ಟ್ರಾನಿಕ್ಸ್ ಉತ್ಪಾದನಾ ವಲಯದಲ್ಲಿ ಕಳೆದ 12 ತಿಂಗಳಿನಲ್ಲಿ 1.10 ಲಕ್ಷ ಕೋಟಿ ರೂಪಾಯಿಗಳು ಹರಿದುಬಂದಿದ್ದು ಇನ್ನೂ ಹೆಚ್ಚಿನ ಬಂಡವಾಳ ಹರಿದು ಬರುವ ಸಾಧ್ಯತೆ ದಟ್ಟವಾಗಿದೆ.