ಕರ್ನಾಟಕ

ವಿದ್ಯಾವಂತರು ಹೆಚ್ಚು ಮತದಾನ ಮಾಡುವುದು ಕಾಂಗ್ರೆಸ್ ಗೆ ಎಂದ ಸಚಿವ

Pinterest LinkedIn Tumblr

ramaವಿದ್ಯಾವಂತರು ಮತಹಾಕದೇ ಇರುವುದರಿಂದ ಕಾಂಗ್ರೆಸ್‍ಗೆ ಲಾಭವಾಗಿದೆ ಎನ್ನುವ ಮೂಲಕ ವಿವಾದಕ್ಕೆ ಕಾರಣರಾಗಿದ್ದ ಸಾರಿಗೆ ಮತ್ತು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ತಾವು ಆ ರೀತಿ ಮಾತನಾಡಿಯೇ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ರಾಮಲಿಂಗಾ ರೆಡ್ಡಿ ವಿದ್ಯಾವಂತರು ಹೆಚ್ಚು ಮತದಾನ ಮಾಡುವುದು ಕಾಂಗ್ರೆಸ್‍ಗೆ, ಅಪಾರ್ಟ್‍ಮೆಂಟ್ ನಿವಾಸಿಗಳು ಮತದಾನ ಮಾಡಿಲ್ಲ ಎಂದಷ್ಟೇ ನಾನು ಹೇಳಿದ್ದೆ. ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ವಿವಾದ ಸೃಷ್ಟಿಸಲಾಗಿದೆ ಅಷ್ಟೇ ಎಂದು ತಿಳಿಸಿದರು.

ಇದೇ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ನಾವು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ರೆಡ್ಡಿ  ಕಾಂಗ್ರೆಸ್‍ಗೆ ಸ್ಪಷ್ಟ ಬಹುಮತ ಸಿಗುತ್ತದೆ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸಿದ್ದು ಸೋಲಿನ ಪ್ರಶ್ನೆ ಬಾರದ ಕಾರಣ  ಯಾರು ಹೊಣೆ ಹೊರುವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.

Write A Comment