ಇಸ್ಲಾಮಾಬಾದ್: ಪಾಕಿಸ್ತಾನ ಭಾರತದೊಂದಿಗೆ ಎಲ್ಲಾ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲು ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಯುಎಸ್ ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸುಸಾನ್ ರೈಸ್ ಗೆ ತಿಳಿಸಿದ್ದಾರೆ.
ಭಾರತ-ಪಾಕಿಸ್ತಾನ ನಡುವಿನ ಎನ್ಎಸ್ಎ ನಡುವಿನ ಮಾತುಕತೆ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದು ಅಮೆರಿಕಾದ ಭದ್ರತಾ ಸಲಹೆಗಾರರೊಂದಿಗೆ ಭಾರತ ಹಾಗೂ ಅಫ್ಘಾನಿಸ್ತಾನದೊಂದಿಗಿನ ಸಂಬಂಧದ ಬಗ್ಗೆ ನವಾಜ್ ಷರೀಫ್ ಮಾತುಕತೆ ನಡೆಸಿದ್ದಾರೆ.
ಅಮೇರಿಕ ಭದ್ರತಾ ಸಲಹೆಗಾರ ರೈಸ್, ಪಾಕಿಸ್ತಾನ ಪ್ರವಾಸದಲ್ಲಿದ್ದು ಅಲ್ಲಿನ ಮಿಲಿಟರಿ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಯುಎಸ್ ಭದ್ರತಾ ಸಲಹೆಗಾರರನ್ನು ಭೇಟಿ ಮಾಡಿದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಆರ್ಥಿಕತೆ, ರಕ್ಷಣೆ ಮತ್ತು ಭಯೋತ್ಪಾದನಾ ನಿಗ್ರಹ ವಿಷಯದಲ್ಲಿ ಅಮೇರಿಕಾ ಪಾಕಿಸ್ತಾನದ ಪ್ರಮುಖ ಮಿತ್ರ ರಾಷ್ಟ್ರ ಎಂದು ಹೇಳಿದ್ದಾರೆ. ಇದೇ ವೇಳೆ ಭಾರತದೊಂದಿಗೆ ಮುಕ್ತ ಮಾತುಕತೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.