ಕರ್ನಾಟಕ

ಕಲಬುರ್ಗಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ

Pinterest LinkedIn Tumblr

sidda

ಬೆಂಗಳೂರು, ಆ.31: ಖ್ಯಾತ ಸಾಹಿತಿ, ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ. ನಿಷ್ಠುರ ನಡೆ ನುಡಿಯಿಂದ ಹೆಸರಾಗಿದ್ದ ಖ್ಯಾತ ವಿಚಾರವಾದಿ ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೊಲೆ ಪ್ರಕರಣದ ಬಗ್ಗೆ ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ಯಂತ ಕ್ಷಿಪ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಈ ಕೊಲೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲಾಗುವುದು. ಹಾಗಾಗಿಯೇ ಈ ಪ್ರಕರಣವನ್ನು ಸಿಐಡಿಗೆ ವಹಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದರು.

ಈ ಪ್ರಕರಣದ ತನಿಖೆಯನ್ನು ಸಿಐಡಿ ಅಥವಾ ಸಿಬಿಐನಿಂದ ನಡೆಸುವ ಬಗ್ಗೆ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ಸಿಐಡಿಯಿಂದಲೇ ತನಿಖೆ ನಡೆಸುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Write A Comment