ರಾಷ್ಟ್ರೀಯ

ವಿಫಲವಾಗಿರುವುದು ಕಾಂಗ್ರೆಸ್, ಮೋದಿ ಸರ್ಕಾರವಲ್ಲ: ಸ್ಮೃತಿ ಇರಾನಿ

Pinterest LinkedIn Tumblr

smriti-iraniನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿರುವುದು, ಕಾಂಗ್ರೆಸ್ ನ ವೈಫಲ್ಯವನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಡಲು ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಸ್ಪಷ್ಟವಾಗಿದೆ, ವಿಫಲವಾಗಿರುವುದು ಕಾಂಗ್ರೆಸ್ಸೇ ಹೊರತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ರೈತರಿಗಾಗಿ ಇಂದು ಹೋರಾಟ ನಡೆಸುತ್ತಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಅಮೇಥಿಯಲ್ಲೇ ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗಿತ್ತು, ಇದನ್ನು ಕಾಂಗ್ರೆಸ್ ನವರು ಮರೆತಿದ್ದಾರೆ ಎಂದು ಸ್ಮೃತಿ ಇರಾನಿ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ರೈತರ ಭೂಮಿಯನ್ನು ಕಿತ್ತುಕೊಂಡ ಮಗನನನ್ನು ಶ್ಲಾಘಿಸುವ ಒಬ್ಬ ತಾಯಿಯ ಹೆಸರನ್ನು ಕೊಡಿ ಎಂದು ಸ್ಮೃತಿ ಇರಾನಿ ಸೋನಿಯಾ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ  ಸೋನಿಯಾ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಭೂ ವಿಧೇಯಕವನ್ನು ಹಿಂತೆಗೆದುಕೊಂಡಿರುವ ಸರ್ಕಾರದ ನಿರ್ಧಾರದಿಂದ ಅದು ವಾಸ್ತವ ಸ್ಥಿತಿಯಿಂದ ದೂರವಿದೆ ಎಂಬುದು ತಿಳಿಯುತ್ತದೆ ಎಂದಿದ್ದರು.

Write A Comment