ಮಂಗಳೂರು, ಸೆ.14: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಸೆ.15 ರಂದು ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡ ಲಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ.ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
ಅಂದು ಚಾರ್ಮಾಡಿ, ಹಾಗೂ ಸುಳ್ಯ ಸಂಪಾಜೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ಆ ದಿನ ಒಟ್ಟು 500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
