ಕನ್ನಡ ವಾರ್ತೆಗಳು

ಮಂಗಳೂರಿನಲ್ಲಿ “ಜನಮನ” ಕಾರ್ಯಕ್ರಮ : ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಚಿವರ ನೇರ ಸಂವಾದ

Pinterest LinkedIn Tumblr

Rai_janamana_photo_1

ಮಂಗಳೂರು, ಸೆ.15: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೊಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ, ಬಿದಾಯಿ, ಕ್ಷೀರಧಾರೆ, ಋಣಮುಕ್ತ ಮತ್ತಿತರ ಯೋಜನೆಗಳ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮ “ಜನಮನ” ಮಂಗಳವಾರ ನಗರದ ಮಿಲಾಗ್ರಿಸ್ ಹಾಲ್‌ನಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರು “ಜನಮನ” ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಹಾಗೂ ಅವುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ನೇರವಾಗಿ ಮತ್ತು ಮುಕ್ತವಾಗಿ ಹಂಚಿಕೊಂಡರು.

Rai_janamana_photo_2 Rai_janamana_photo_3 Rai_janamana_photo_4 Rai_janamana_photo_5 Rai_janamana_photo_6 Rai_janamana_photo_7 Rai_janamana_photo_8 Rai_janamana_photo_9 Rai_janamana_photo_10 Rai_janamana_photo_11 Rai_janamana_photo_12 Rai_janamana_photo_13 Rai_janamana_photo_14 Rai_janamana_photo_15 Rai_janamana_photo_16 Rai_janamana_photo_17 Rai_janamana_photo_18 Rai_janamana_photo_19 Rai_janamana_photo_20 Rai_janamana_photo_21

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯುಜನ ಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್,ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಜಿಲ್ಲೆಯ ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಇಲಾಖೆಗಳ ಅಧಿಕಾರಿಗಳು ಹಾಗೂ ರಾಜ್ಯ ಸರಕಾರದ 12 ಪ್ರಮುಖ ಯೋಜನೆಗಳ ಫಲಾನುಭವಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.

Write A Comment