ವರದಿ / ಚಿತ್ರ : ಸತೀಶ್ ಕಾಪಿಕಾಡ್
ಮಂಗಳೂರು : ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ ನಗರದ ಬಂಟ್ಸ್‌ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 12ನೇ ವರ್ಷದ ಶ್ರೀ ಗಣೇಶೋತ್ಸವವದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿಯ ಭವ್ಯ ಶೋಭಾಯಾತ್ರೆಯು ಶನಿವಾರ ಸಂಜೆ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮೆನೇಜಿಂಗ್ ಟ್ರಸ್ಟಿ ಶ್ರೀ ಮಾಲಾಡಿ ಅಜಿತ್‌ಕುಮಾರ್ ರೈ ಅವರ ನೇತ್ರತ್ವದಲ್ಲಿ ಬಹಳ ವಿಜೃಭಂಣೆಯಿಂದ ಜರಗಿತ್ತು.
ಶನಿವಾರ ಬೆಳಿಗ್ಗೆ 8.00 ಕ್ಕೆ ಪ್ರಾತಃಕಾಲದ ಪೂಜೆಯಾಗಿ 8.30ಕ್ಕೆ ಅಷ್ತೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ ಪ್ರಾರಂಭವಾಗಿ 11.00 ಗಂಟೆಗೆ ಪೂರ್ಣಾಹುತಿ, ಮಹಾಪೂಜೆ ಪ್ರಸಾದ ವಿತರಣೆ, 12.30ಕ್ಕೆ “ಮಹಾ ಅನ್ನಸಂತರ್ಪಣೆ” ಜರಗಿತ್ತು. ಮಧ್ಯಾಹ್ನ ವಿಸರ್ಜನಾ ಪೂಜೆ ನಡೆದು ದೀಪ ಪ್ರಜ್ವಲನದೊಂದಿಗೆ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಬಂಟ್ಸ್‌ಹಾಸ್ಟೆಲ್‌ನ ಓಂಕಾರ ನಗರದಿಂದ 50ಕ್ಕೂ ಹೆಚ್ಚು ಭಜನಾ ತಂಡದೊಂದಿಗೆ ಶೋಭಾಯಾತ್ರೆಯಲ್ಲಿ ಹೊರಟ ಶ್ರೀ ಮಹಾಗಣಪತಿಯ ವಿಗ್ರಹವನ್ನು ಶ್ರೀ ಮಹಾಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಯಿತ್ತು.
ಪ್ರತಿಭಾನ್ವೇಷಣೆ ಸಮಿತಿಯ ಸಂಚಾಲಕಿ ಡಾ.ಅಶಾ ಜ್ಯೋತಿ ರೈ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜಕ ಶ್ರೀಗಣೇಶೋತ್ಸವ ಸಮಿತಿಯ ಟ್ರಸ್ಟಿಗಳು ಮತ್ತು ಪದಾಧಿಕಾರಿಗಳಾದ ಶ್ರೀ ಮಂಜುನಾಥ ಭಂಡಾರಿ ಶೆಡ್ಯೆ. ಶ್ರೀ ರವಿರಾಜ ಶೆಟ್ಟಿ ನಿಟ್ಟೆಗುತ್ತು, ಶ್ರೀ ಕೃಷ್ಣಪ್ರಸಾದ್ ರೈ ಬೆಳ್ಳಿಪ್ಪಾಡಿ, ಶ್ರೀ ಕೆ. ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟು ಗುತ್ತು, ಸಿಎ. ಶಾಂತಾರಾಮ ಶೆಟ್ಟಿ, ಶ್ರೀ ದಿವಾಕರ ಸಾಮಾನಿ ಚೇಳಾರುಗುತ್ತು, ಶ್ರೀ ಕೃಷ್ಣರಾಜ ಸುಲಾಯ ಅಡ್ಯಾರ್‌ಗುತ್ತು, ಶ್ರೀ ಬಿ.ಶೇಖರ್ ಶೆಟ್ಟಿ, ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ,ಶ್ರೀಮತಿ ಪ್ರತಿಮಾ ಆರ್.ಶೆಟ್ಟಿ, ಶ್ರೀಮತಿ ಮೀನಾ ಆರ್.ಶೆಟ್ಟಿ,ಶ್ರೀ ಮನೀಷ್ ರೈ, ಶ್ರೀ ಅಶ್ವತ್ಥಾಮ ಹೆಗ್ಡೆ, ಶ್ರೀ ಜಗದೀಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
















































