ಬೆಂಗಳೂರು: ವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಮೋಟಾರು ಸಾರಿಗೆ ಕಾಂಗ್ರೆಸ್ ಗುರುವಾರದಿಂದ (ಅ.1) ದೇಶದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದೆ.
‘ಮುಷ್ಕರಕ್ಕೆ ಬೆಂಬಲ ಸೂಚಿಸಿ ರಾಜ್ಯದಲ್ಲಿಯೂ ಸರಕು ಸಾಗಣೆ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು’ ಎಂದು ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ತಿಳಿಸಿದ್ದಾರೆ.