ರೋಸ್ಬರ್ಗ್ (ರಾಯಿಟರ್ಸ್):ಅಮೆರಿಕದ ಒರೇಗಾನ್ ಕಾಲೇಜಿನ ಕ್ಯಾಂಪಸ್ನಲ್ಲಿ ಬಂದೂಕುಧಾರಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿ 13 ಜನರನ್ನು ಹತ್ಯೆ ಮಾಡಿದ್ದಾನೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ದಾಳಿ ನಡೆಸಿದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು 26 ವರ್ಷದ ಕ್ರಿಸ್ ಹ್ಯಾಪರ್ ಎಂದು ಗುರುತಿಸಲಾಗಿದೆ. ಯಾವ ಕಾರಣಕ್ಕೆ ಗುಂಡಿನ ದಾಳಿ ನಡೆದಿದೆ ಎಂಬುದು ತಿಳಿದುಬಂದಿಲ್ಲ.

















