ರಾಷ್ಟ್ರೀಯ

ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮಗಾಂಧಿಗೆ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

narendra-modi at rajghat

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 146ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮನಿಗೆ ನಮನ ಸಲ್ಲಿಸಿದರು.

ಈ ವೇಳೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಕೇಂದ್ರ ನಗರಾಭಿವೃದ್ದಿ ಸಚಿವ ಎಂ.ವೆಂಕಯ್ಯ ನಾಯ್ಡು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಮಹಾತ್ಮ ಗಾಂಧಿ ಅವರ ‘ಸ್ವಚ್ಛ ಭಾರತ’ ಕನಸನ್ನು ಈಡೇರಿಸಬೇಕು. ಸ್ವಚ್ಛತೆ ಮಹಾತ್ಮ ಗಾಂಧಿಯವರ ಹೃದಯಕ್ಕೆ ಹತ್ತಿರವಾದದ್ದು, ಸ್ವಚ್ಛ ಭಾರತ ನಿರ್ಮಾಣಕ್ಕೆ ಬದ್ಧರಾಗೋಣ ಮತ್ತು ಅವರ ಬಾಪು ಕನಸನ್ನು ನನಸು ಮಾಡೋಣ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ವಿಶ್ವದಾದ್ಯಂತ ಭಾರತೀಯರು ಇಂದು ಮಹಾತ್ಮ ಗಾಂಧಿ ಅವರ 146ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಅಲ್ಲದೆ ಅಕ್ಟೋಬರ್ 2 ಅಂತಾರಾಷ್ಟ್ರೀಯ ಅಹಿಂಸಾ ದಿನ ಎಂದು ಆಚರಿಸಲಾಗುತ್ತಿದೆ.

Write A Comment