ಕನ್ನಡ ವಾರ್ತೆಗಳು

ಎತ್ತಿನಹೊಳೆ ಯೋಜನೆ ಬಗ್ಗೆ ಸೋನಿಯಾ ಗಾಂಧಿ ಜೊತೆ ಚರ್ಚೆ : ಸೋನಿಯಾರಿಂದ ಸಕಾರಾತ್ಮಕ ಸ್ಪಂದನೆ : ಪೂಜಾರಿ

Pinterest LinkedIn Tumblr

poojary_meet_photo_1

ಮಂಗಳೂರು: ಎತ್ತಿನಹೊಳೆ ಯೋಜನೆಯ ಕುರಿತು ತಾನು ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಗಮನಕ್ಕೆ ತಂದಿದ್ದು, ಎತ್ತಿನಹೊಳೆ ಯೋಜನೆಯಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಬಗ್ಗೆ ಸೋನಿಯಾ ಗಾಂಧಿ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಈ ಸಂದರ್ಭ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.

ನಿವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯ ಕುರಿತು ತನ್ನ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚಿಸುವಂತೆ ಅವರು ಆದೇಶ ನೀಡಿದ್ದಾರೆ ಎಂದು ಹೇಳಿದರು.

poojary_meet_photo_2

ಸಂಸದ ನಳಿನ್ ಕುಮಾರ್ ಕಟೀಲ್ ಅನಗತ್ಯ ಜಾಥಾಗಳನ್ನು ಕೈಗೊಂಡು ಟೈಂ ವೇಸ್ಟ್ ಮಾಡುತ್ತಿದ್ದಾರೆ. ಅದರ ಬದಲು ಅವರು ತಮ್ಮ ಕೇಂದ್ರ ಸರಕಾರದ ಸಚಿವರಲ್ಲಿ ಈ ಕುರಿತು ಚರ್ಚಿಸಿ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಲಿ ಎಂದರು.

ಎತ್ತಿನಹೊಳೆ ಯೋಜನೆಯ ಕುರಿತು ಅರಣ್ಯ ಇಲಾಖೆಗೆ ಸಂಬಂಧಪಟ್ಟವರಿಗೆ ಯಾವುದೇ ಮಾಹಿತಿ ಇಲ್ಲ. ಅವರು ತಕ್ಷಣ ಈ ಯೋಜನೆಯ ಕುರಿತು ಅಧ್ಯಯನ ನಡೆಸಿ ಜನರ ಹಣ ಪೋಲಾಗುವುದನ್ನು ಮತ್ತು ನೇತ್ರಾವತಿಯ ರಕ್ಷಣೆಗೆ ಮುಂದಾಗಲಿ ಎಂದು ಪೂಜಾರಿ ಸಲಹೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಟಿ.ಕೆ. ಸುಧೀರ್, ದೀಪಕ್ ಪೂಜಾರಿ, ನಾಗೇಂದ್ರ, ಪ್ರವೀಣ್ ಚಂದ್ರ ಆಳ್ಬ, ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.

Write A Comment