ರಾಷ್ಟ್ರೀಯ

ಬಾಲಕಿಯ ಮೇಲೆ ಗ್ಯಾಂಗ್‌ರೇಪ್: ಸ್ಥಳೀಯರಿಂದ ಭಾರಿ ಪ್ರತಿಭಟನೆ

Pinterest LinkedIn Tumblr

rapeಕಟಿಹಾರ್: 16 ವರ್ಷದ ಬುಡಕಟ್ಟು ಸಮುದಾಯದ ಬಾಲಕಿಯ ಮೇಲೆ ಕೆಲ ದುಷ್ಕರ್ಮಿಗಳು ಗ್ಯಾಂಗ್‌ರೇಪ್ ಎಸಗಿದ ಹಿನ್ನೆಲೆಯಲ್ಲಿ ಸ್ಥಳೀಯರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ.

ಕಳೆದ ಸೆಪ್ಟೆಂಬರ್ 22 ರಂದು ಪಶ್ಚಿಮ ಬಂಗಾಳ ಮೂಲದ ಬಾಲಕಿ ತನ್ನ ಸಂಬಂಧಿಕರ ಮನೆಯಿಂದ ಮರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು

ಬಾಲಕಿಯ ಮೇಲಿನ ಗ್ಯಾಂಗ್‌ರೇಪ್ ಕುರಿತಂತೆ ಮುಫಾಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಆರೋಪಿಗಳಲ್ಲಿ ಒಬ್ಬ ಆರೋಪಿಯನ್ನು ಬಾಲಕಿ ಗುರುತಿಸಿದ್ದಳು ಎನ್ನಲಾಗಿದೆ.

ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಪರಾರಿಯಾಗಲು ಸಹಕರಿಸಿದ್ದಾರೆ ಎಂದು ಆರೋಪಿಸಿ ಸಾವಿರಾರು ಜನರು ಪೊಲೀಸ್ ಠಾಣೆಯ ಮುಂದೆ ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Write A Comment