ಕರ್ನಾಟಕ

ನಟ ಶಿವರಾಜ್ ಕುಮಾರ್ ಅಸ್ವಸ್ಥ; ಮಲ್ಯ ಆಸ್ಪತ್ರೆಗೆ ದಾಖಲು: ‘ಯಾರು ಭಯ ಪಡುವ ಆಗತ್ಯವಿಲ್ಲ’

Pinterest LinkedIn Tumblr

shivanna

ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ಕುಮಾರ್ ಅವರು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಜಿಮ್ ಮಾಡುವ ಸಂದರ್ಭದಲ್ಲಿ ಅಸ್ವಸ್ಥಗೊಂಡ ಶಿವಣ್ಣ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಆಂಜಿಯೋಗ್ರಾಂ ಪರೀಕ್ಷೆ ಮಾಡುವ ಅಗತ್ಯ ಇದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಆಂಜಿಯೋಗ್ರಾಂ ಪರೀಕ್ಷೆಯಲ್ಲಿ ಶಿವಣ್ಣನ ಹೃದಯದ ರಕ್ತನಾಳ ಬ್ಲಾಕ್ ಆಗಿರುವುದು ಪತ್ತೆಯಾಗಿದ್ದು, ನಟನಿಗೆ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ತೀರ್ಮಾನಿಸಿದ್ದಾರೆ.

ಮಲ್ಯ ಆಸ್ಪತ್ರೆಯ ಡಾ.ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮಾಡಲಿದ್ದು, ಶಿವಣ್ಣ ಇನ್ನೂ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.

ಚೆನ್ನಾಗಿದ್ದಾರೆ: ಶಿವರಾಜ್ ಕುಮಾರ್ ಚೆನ್ನಾಗಿದ್ದಾರೆ. ಸ್ವಲ್ಪ ಸುಸ್ತಾಗಿದ್ದಾರೆ ಅಷ್ಟೇ. ಆರಂಭದಲ್ಲಿ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರು ಭಯ ಪಡುವ ಆಗತ್ಯವಿಲ್ಲ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬಿಗಿ ಭದ್ರತೆ: ಶಿವಣ್ಣಗೆ ಲಘು ಹೃದಯಾಘಾತ ವಿಚಾರ ತಿಳಿದ ಕೂಡಲೇ ಅಭಿಮಾನಿಗಳು ಮಲ್ಯ ಆಸ್ಪತ್ರೆಗೆ ಬರುತ್ತಿದ್ದು, ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Write A Comment