ಕರ್ನಾಟಕ

ರಾಘವೇಶ್ವರಶ್ರೀ ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್

Pinterest LinkedIn Tumblr

raghaveshwara-shree01ಬೆಂಗಳೂರು, ಅ.8: ರಾಮಕಥಾ ಗಾಯಕಿಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳಿಗೆ ಖುದ್ದು ಹಾಜರಾಗುವಂತೆ ನಗರದ ಒಂದನೆ ಎಸಿಎಂಎಂ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ.ಶ್ರೀಗಳು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಈ ಮಧ್ಯೆ ಶ್ರೀಗಳು ತನಿಖೆಗೆ ಸ್ಪಂದಿಸುತ್ತಿಲ್ಲ ಹಾಗೂ ಸಾಕ್ಷಿಗಳಿಗೆ ಬೆದರಿಕೆಯೊಡ್ಡುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಐಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸರಕಾರಿ ವಿಶೇಷ ಅಭಿಯೋಜಕ ಬಿ.ಎ.ಬೆಳ್ಳಿಯಪ್ಪ ಸಿಐಡಿ ಪರವಾಗಿ ಸೋಮವಾರ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಮಕಥಾ ಗಾಯಕಿಯ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಈಗಾಗಲೇ ಸಿಐಡಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ. ಆ ಬಳಿಕ ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಶ್ರೀಗಳಿಗೆ ನೋಟಿಸ್ ನೀಡಿದ್ದು ಅವರು ಪರೀಕ್ಷೆಗೆ ಹಾಜರಾಗಿಲ್ಲ.

Write A Comment