ಸ್ಯಾಂಡಲ್ ವುಡ್ ಅಂಗಳದಲ್ಲಿ ಈಗಾಗಲೇ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿ ಹಾಕಿರುವ ಸಿನಿಮಾ ಕಿಲ್ಲಿಂಗ್ ವೀರಪ್ಪನ್. ಶಿವರಾಜ್ ಕುಮಾರ್ ಹಾಗೂ ರಾಮ್ ಗೋಪಾಲ ಮರ್ಮಾ ಕಾಂಬಿನೇಷನ್ ನ ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿ ಹಾಕಿತ್ತು. ಇದೀಗ ಈ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
ನವೆಂಬರ್ 6 ಕ್ಕೆ ಸಿನಿಮಾ ತಮಿಳು, ತೆಲುಗು, ಕನ್ನಡ, ಹಿಂದಿ ಹೀಗೆ ಎಲ್ಲಾ ಭಾಷೆಗಳಲ್ಲೂ ಏಕಕಾಲಕ್ಕೆ ಬೆಗಂಳೂರಿನಲ್ಲಿ ರಿಲೀಸ್ ಆಗುತ್ತಿದೆ. ವಿಶೇಷ ಅಂದ್ರೆ ಈ ಸಿನಿಮಾ 3 ಸಾವಿರ ಥಿಯೇಟರ್ ಗಳಲ್ಲಿ ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲೇ 450 ಸಿನಿಮಾ ಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ಆ ಮೂಲಕ ಹೊಸ ದಾಖಲೆ ಬರೋದಕ್ಕೆ ಸಿನಿಮಾ ತಂಡ ತಯಾರಾಗಿದೆ.
ಇನ್ನು ಬೆಂಗಳೂರಿನ ಮುಖ್ಯ ಚಿತ್ರಮಂದಿರ ಸಂತೋಷ್ ಹಾಗೂ ಕಪಾಲಿ ಥಿಯೇಟರ್ ನಲ್ಲಿ ಕನ್ನಡ ಭಾಷೆಯಲ್ಲಿ ‘ಕಿಲ್ಲಿಂಗ್ ವೀರಪ್ಪನ್’ ಪ್ರದರ್ಶನಗೊಂಡರೆ, ಭೂಮಿಕ ಮತ್ತು ನಟರಾಜ ಚಿತ್ರಮಂದಿರದಲ್ಲಿ ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಪ್ರದರ್ಶನಗೊಳ್ಳಲಿದೆ.