ಶ್ರೀನಗರ, ಅ.9: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪಕ್ಷೇತರ ಶಾಸಕ ಎಂಜಿನಿಯರ್ ರಶೀದ್ ಅವರನ್ನು ರಾಜ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಗದ್ದಲದ ಹಿನ್ನೆಲೆಯಲ್ಲಿ ಗೋಹತ್ಯೆಗೆ ಸಂಬಂಧಿಸಿದ ಮಸೂದೆಯನ್ನು ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಚರ್ಚೆಗೆ ಎತ್ತಿಕೊಂಡಿರಲಿಲ್ಲ. ಇದನ್ನು ವಿರೋಧಿಸಿ ಅವರು ಪ್ರತಿಭಟನೆ ವ್ಯಕ್ತಪಡಿಸಿದರು.
ರಾಜ್ಯ ವಿಧಾನಸಭೆ ಸಚಿವಾಲಯದ ಮುಂದೆ ತಮ್ಮ ಬೆಂಬಲಿಗರೊಂದಿಗೆ ಧರಣಿ ನಡೆಸುತ್ತಿದ್ದ ರಶೀದ್ ಮತ್ತು ಅವರ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.