ಚೆನ್ನೈ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಹುಭಾಷಾ ನಟಿ ಮನೋರಮಾ(78) ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ಚಿತ್ರರಂಗದಲ್ಲಿ ಎಲ್ಲರಿಂದಲೂ ಆಚಿ ಎಂದು ಕರೆಸಿಕೊಳ್ಳುತ್ತಿದ್ದ ಮನೋರಮಾ ತಮಿಳು, ತೆಲುಗು, ಮಲೆಯಾಳಂ, ಹಿಂದಿ ಸೇರಿದಂತೆ ಸುಮಾರು 1300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 1 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದ ಇವರು ಇಂದಿನ ಕಾಲದ ಎಲ್ಲಾ ಸೂಪರ್ ಸ್ಟಾರ್ಗಳೊಂದಿಗೆ ಆಚಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೇ 5 ಜನ ಮುಖ್ಯಮಂತ್ರಿಗಳೊಂದಿಗೆ ಸಿನಿಮಾದಲ್ಲಿ ನಟಿಸಿದ ಏಕೈಕ ನಟಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
1 ಸಾವಿರ ಸಿನಿಮಾಗಳಲ್ಲಿ ಅಭಿನಯಿಸಿದ್ದಕ್ಕೆ ಗಿನ್ನಿಸ್ ದಾಖಲೆ ಪುಸ್ತಕದಲ್ಲಿ ಮನೋರಮಾ ಹೆಸರು ಸೇರ್ಪಡೆಯಾಗಿತ್ತು.
ಚೆನ್ನೈನ ನಿವಾಸದಲ್ಲಿ ಮನೋರಮಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚಿತ್ರರಂಗದ ಘಟಾನುಘಟಿಗಳು ಆಗಮಿಸಿ ಅಗಲಿದ ದಿವ್ಯಚೇತನದ ದರ್ಶನ ಪಡೆಯುತ್ತಿದ್ದಾರೆ.
