ಕನ್ನಡ ವಾರ್ತೆಗಳು

ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ತಗಡು ಶೀಟ್ ಗಳನ್ನು ಕಳವು ಗೈದ ಆರೋಪಿಗಳ ಬಂಧನ.

Pinterest LinkedIn Tumblr

sheet_theft_accusded

ಬಂಟ್ವಾಳ,ಅ.13 : ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ತಗಡು ಶೀಟ್ ಗಳನ್ನು ಕಳವು ಗೈದ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಕಾವಳಕಟ್ಟೆ ನಿವಾಸಿಗಳಾದ ಅಬ್ದುಲ್ ಹಝೀಝ್, ಇಸ್ಮಾಯಿಲ್ ಹಾಗೂ ಹರಿಶ್ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ.

ಕಾವಳಕಟ್ಟೆ ಹಾಗೂ ವಗ್ಗ ಪರಿಸರದಿಂದ 100 ಸೆಂಟ್ರಿಂಗ್ ಶೀಟ್ ಗಳನ್ನು ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳವು ಗೈದ ಸೊತ್ತಿನ ಮೌಲ್ಯ ಸುಮಾರು 1 ಲಕ್ಷ ಎಂದು ಅಂದಾಜಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕೆ ಹಾಜುರಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ರಕ್ಷಿತ್ ಗೌಡ, ಸಿಬ್ಬಂದಿಗಳಾದ ಜಗದೀಶ್, ಪ್ರಶಾಂತ್, ಲಕ್ಷ್ಮಣ್ ಹಾಗೂ ಪ್ರವೀಣ್ ಭಾಗವಹಿಸಿದ್ದರು.

Write A Comment