ಮಂಗಳೂರು,ಅ.16 : ಪ್ರಗತಿ ಪಥ ಕೇಂದ್ರ ಸರ್ಕಾರದ ಹೊಸ ಉಪಕ್ರಮಗಳ ಕಿರುನೋಟವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ಸಿಂಹ ನಾಯಕ್ರವರು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು.
ಸಂಸದರಾದ ನಳಿನ್ ಕುಮಾರ್ ಕಟೀಲ್, ಕೃಷ್ಣ ಪಾಲೆಮಾರ್, ಮೋನಪ್ಪ ಭಂಡಾರಿ, ವಿಕಾಸ್ ಪುತ್ತೂರು, ಡಾ.ಭರತ್ ಶೆಟ್ಟಿ, ರುಕ್ಮಯ್ಯ ಪೂಜಾರಿ, ಉಮಾನಾಥ್ ಕೋಟ್ಯಾನ್, ರವಿಶಂಕರ್ ಮಿಜಾರ್, ಸುಧೀರ್ ಶೆಟ್ಟಿ ಕಣ್ಣೂರು, ಕಿಶೋರ್ ರೈ ಮುಂತಾದವರು ಉಪಸ್ಥಿತರಿದ್ದರು.
