ಕರ್ನಾಟಕ

ಪಿಎಸ್ಐ ಜಗದೀಶ್ ಹತ್ಯೆ ಆರೋಪಿ ಮಧು, ಹರೀಶ್ ಬಾಬು ಬಂಧನ

Pinterest LinkedIn Tumblr

madhu-harishನಾಗ್ಪುರ್: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಜಗದೀಶ್ ಕೊಲೆ ಆರೋಪಿಗಳಾದ ಮಧು ಹಾಗೂ ಹರೀಶ್ ಬಾಬುವನ್ನು ನಾಗ್ಪುರ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಹೈದರಾಬಾದ್ ನಿಂದ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಬರುತ್ತಿರುವ ಖಚಿತ ಮಾಹಿತಿ ಪಡೆದ ನಾಗ್ಪುರ ಕ್ರೈಂ ಬ್ರಾಂಚ್ ಪೊಲೀಸರು ಇಂದ ಸಂಜೆ 4 ಗಂಟೆ ಸುಮಾರಿಗೆ ಬಂಧಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಕರ್ನಾಟಕ ಪೊಲೀಸರು ಕಳೆದ ಮೂರು ದಿನಗಳಿಂದ ಇನ್ನಿಲ್ಲದ ಪ್ರಯತ್ನ ಮಾಡಿದ್ದರು. ಆರೋಪಿಗಳು ಮಹಾರಾಷ್ಟ್ರದಲ್ಲಿ ಅಡಗಿರುವುದಾಗಿ ಮಾಹಿತಿ ಇತ್ತು. ಈ ಬಗ್ಗೆ ಕರ್ನಾಟಕ ಪೊಲೀಸರು ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲು ಕರ್ನಾಟಕ ಪೊಲೀಸ್ ತಂಡವೊಂದು ನಾಗ್ಪುರಕ್ಕೆ ತೆರಳುತ್ತಿದೆ.

Write A Comment