ರಾಷ್ಟ್ರೀಯ

ದಲಿತರ ವಿರುದ್ಧ ವಿಕೆ ಸಿಂಗ್ ವಿವಾದಾತ್ಮಕ ಹೇಳಿಕೆ: ಯುವ ಕಾಂಗ್ರೆಸ್ ಪ್ರತಿಭಟನೆ

Pinterest LinkedIn Tumblr

protestನವದೆಹಲಿ: ದಲಿತರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ವಿಕೆ ಸಿಂಗ್ ವಿವಾದಾತ್ಮಕ ಹೇಳಿಕೆ ಪರಂಪರೆ ಮತ್ತು ಸಂಸ್ಕೃತಿಗೆ ವಿರುದ್ಧವಾಗಿದೆ ಎಂಬ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.

ಹರಿಯಾಣದಲ್ಲಿ ದಲಿತ ಮಕ್ಕಳ  ಹತ್ಯೆ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ವಿ.ಕೆ.ಸಿಂಗ್, ಎಲ್ಲೋ ನಾಯಿಗೆ ಕಲ್ಲು ಹೊಡೆದರೆ ಕೇಂದ್ರವನ್ನು ದೂಷಿಸುವುದು ಸರಿಯಲ್ಲ. ಇಂತಹ ವಿಚಾರಗಳು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಸಿಂಗ್ ಅವರ ಹೇಳಿಕೆ ರಾಷ್ಟ್ರಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ತಮ್ಮ ಅಚಾತುರ್ಯ ಅರಿತ ವಿಕೆ ಸಿಂಗ್ ಬಳಿಕ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದರು.

Write A Comment