ಕನ್ನಡ ವಾರ್ತೆಗಳು

ಪ್ಲಾಸ್ಟಿಕ್ ನಿಷೇಧ ಶೀಘ್ರದಲ್ಲೇ ಜಾರಿ : ಸಚಿವ ಬಿ. ರಮಾನಾಥ ರೈ

Pinterest LinkedIn Tumblr

rai_nationl_plactc

ಮಂಗಳೂರು, ನ. 03: ಜಾಗತಿಕ ತಾಪಮಾನ ಹೆಚ್ಚುತ್ತಿರುವ ಇಂದಿನ ಕಾಲಘಟ್ಟದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ನಿಷೇಧ ಕರ್ನಾಟಕದಲ್ಲಿ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.ಅವರು ಜಿ ಪಂನ ನೇತ್ರಾವತಿ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಚ್ಛತಾ ಆಂದೋಲನ ಸಪ್ತಾಹದ ಅಂಗವಾಗಿ ಜಿಲ್ಲಾ ಪಂಚಾಯತ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮನಸುಗಳು ಸ್ವಚ್ಛ ಆದಾಗ ಸ್ವಚ್ಛತೆಯ ಪರಿಕಲ್ಪನೆ ಪರಿಪೂರ್ಣ ವಾಗುತ್ತದೆ ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದರು. ಸೌರಶಕ್ತಿ ಅಳವಡಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸ್ವಂತ ಆದಾಯ ಹಾಗೂ ಕಟ್ಟಡ ಹೊಂದಿರುವ ಜಿಲ್ಲೆಯ ಕನಿಷ್ಠ 20 ಗ್ರಾಮ ಪಂಚಾಯತ್‌ಗಳಲ್ಲಿ ಪ್ರಸಕ್ತ ಸಾಲಿನಿಂದಲೇ ಸೋಲಾರ್ ಅಳವಡಿಕೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಧಾನ ಪರಿಷತ್ ಐವನ್ ಡಿಸೋಜ ಮಾತನಾಡಿ, ಗ್ರಾಪಂ ಹಾಗೂ ತಾಪಂ ಸೇರಿದಂತೆ ಸರಕಾರಿ ಕಟ್ಟಡಗಳಲ್ಲಿ ಹಾಗೂ 25 ಲಕ್ಷ ರೂ.ಗಳಿಂದ ಅಧಿಕ ವೆಚ್ಚದ ಮನೆಗಳನ್ನು ಕಟ್ಟುವವರಿಗೆ ಪರವಾನಿಗೆ ನೀಡುವ ವೇಳೆ ಸೌರ ಶಕ್ತಿ ಅಳವಡಿಕೆ ಹಾಗೂ ಮಳೆ ನೀರು ಸಂಗ್ರಹವನ್ನು ಕಡ್ಡಾಯಗೊಳಿಸುವಂತೆ ಸದನದಲ್ಲಿ ಗಮನ ಸೆಳೆಯುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಚಂದ್ರಕಲಾ, ಮೀನಾಕ್ಷಿ ಮಂಜುನಾಥ್ ಉಪಸ್ಥಿತರಿದ್ದರು. ಸ್ವಚ್ಛತಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿ ಉಮೇಶ್ ಸ್ವಾಗತಿಸಿದರು. ಸ್ವಚ್ಛತಾ ಆಂದೋಲನದ ಸಂಯೋಜಕಿ ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

Write A Comment