ಶಿವಮೊಗ್ಗ: “ಗೋಮಾಂಸ ತಿನ್ನುತ್ತೇನೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕತ್ತಿದ್ದರೆ ಶಿವಮೊಗ್ಗಕ್ಕೆ ಬಂದು ಗೋಮಾಂಸ ಸೇವಿಸಲಿ. ಅವರ ರುಂಡ ಚೆಂಡಾಡುತ್ತೇವೆ” ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರಸಭೆ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಸ್.ಎನ್. ಚನ್ನಬಸಪ್ಪ ಸವಾಲೆಸೆದಿದ್ದಾರೆ.
ಮುಖ್ಯಮಂತ್ರಿಗಳ ಗೋಮಾಂಸ ಸಂಬಂಧಿತ ಹೇಳಿಕೆ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡರಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾತನಾಡಿದ ಅವರು, ಮುಖ್ಯಮಂತ್ರಿಗಳು ಗೋಹತ್ಯೆಯನ್ನು ಸ್ವಾಗತಿಸುತ್ತಾ ತಾವೂ ಕೂಡಾ ಗೋಮಾಂಸ ತಿನ್ನುತ್ತೇವೆ ಎಂದು ಹೇಳಿದ್ದಾರೆ.
ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಅತ್ಯಂತ ಉನ್ನತ ಸ್ಥಾನವನ್ನು ನಾವು ಕೊಟ್ಟಿದ್ದೇವೆ. ಗೋ ಮಾತೆಯ ಹಾಲನ್ನೇ ಕುಡಿದು ನಾವು ಬೆಳೆದವರು. ಮುಖ್ಯಮಂತ್ರಿಗಳ ಹೇಳಿಕೆ ಉದ್ಧಟಟತನದ್ದು, ಸಿಎಂ ವಿರುದ್ದ ಸಾರ್ವಜನಿಕ ದೂರನ್ನು ದಾಖಲಿಸಬೇಕು ಎಂದು ಆಗ್ರಹಿಸಿದರು.
