ಕುಂದಾಪುರ: ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಕೊಲ್ಲೂರು ಶ್ರೀ ಮೂಕಾಂಬಿಕ ದೇವಳಕ್ಕೆ ಭೇಟಿ ನೀಡಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಂದಾಪುರಕ್ಕೆ ಆಗಮಿಸಿದ್ದ ವೇಳೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀನಿವಾಸ್ ಕಲ್ಲೂರಾಯ, ದೇವಳದ ಅಧೀಕ್ಷಕ ರಾಮಕೃಷ್ಣ ಅಡಿಗ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
