ರಾಷ್ಟ್ರೀಯ

ನ್ಯಾಯಾಂಗ ಸ್ವತಂತ್ರವಾಗಿರುವವರೆಗೆ ಅಸಹಿಷ್ಣುತೆ ಆತಂಕ ಬೇಡ: ಮುಖ್ಯ ನ್ಯಾಯಮೂರ್ತಿ

Pinterest LinkedIn Tumblr

nyaನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಅಸಹಿಷ್ಣುತೆ ಕುರಿತ ಚರ್ಚೆಗಳಲ್ಲಿ ರಾಜಕೀಯ ಅಡಗಿರಬಹುದು. ಆದರೆ, ನ್ಯಾಯಾಂಗ ಸ್ವತಂತ್ರವಾಗಿರುವವರೆಗೆ ಯಾವುದೇ ಸಮುದಾಯದ ಜನತೆ ಆತಂಕಪಡುವ ಅಗತ್ಯವಿಲ್ಲ ಎಲ್ಲರ ಹಕ್ಕುಗಳನ್ನು ರಕ್ಷಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಹೇಳಿದ್ದಾರೆ.

ದೇಶದಲ್ಲಿರುವ ಎಲ್ಲಾ ಸಮುದಾಯಗಳ, ವರ್ಗಗಳ ಹಕ್ಕುಗಳನ್ನು ರಕ್ಷಿಸುವ ಹೊಣೆ ಮತ್ತು ಸಾಮರ್ಥ್ಯ ನ್ಯಾಯಾಂಗಕ್ಕಿದೆ. ದೇಶದಲ್ಲಿ ಕಾನೂನು ಮತ್ತು ಸಂವಿಧಾನ ಹಕ್ಕುಗಳು ಪ್ರತಿಯೊಬ್ಬರಿಗೂ ಸಮಾನವಾಗಿವೆ ಎಂದು ತಿಳಿಸಿದ್ದಾರೆ.

ಕಳೆದ ವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಮತ್ತು ಸರಕಾರದ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಗಿತ್ತು. ದೇಶದ ಪ್ರತಿಯೊಬ್ಬ ನಾಗರಿಕನ ಹಿತರಕ್ಷಣೆ, ಮೂಲಭೂತ ಹಕ್ಕುಗಳನ್ನು ತಡೆಯುವುದು ನ್ಯಾಯಾಂಗವಿರುವವರೆಗೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಹಿಷ್ಣುತೆಯಿಂದ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಎರಡು ದಿನಗಳ ಹಿಂದೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ಠಾಕೂರ್, ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ದೇಶದಲ್ಲಿ ನ್ಯಾಯಾಂಗ ಸಂಸ್ಥೆಯ ಮುಖ್ಯಸ್ಥನಾಗಿ ನಾನು ಭರವಸೆ ನೀಡುತ್ತೇನೆ. ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ರಕ್ಷಿಸಲಾಗುವುದು, ಇದರಲ್ಲಿ ಅನೇಕ ರಾಜಕೀಯ ಅಂಶಗಳು ಅಡಗಿವೆ. ನಮ್ಮ ನ್ಯಾಯಾಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದು ದೇಶದಲ್ಲಿ ಸಹಿಷ್ಣುತೆಯಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಹೇಳಿದ್ದಾರೆ.

Write A Comment