
ಮೂಡುಬಿದಿರೆ, ಡಿ.24: ವಿವಿಧತೆಯಲ್ಲಿ ಏಕತೆಯನ್ನು ಸಾರುವ ನಮ್ಮ ದೇಶ ದಲ್ಲಿ ಅದ್ಭುತ ಕಲಾವಿದರಿದ್ದಾರೆ. ದೇಶದ ಏಕತೆ, ಸಾಮರಸ್ಯವನ್ನು ಪ್ರತಿಬಿಂಬಿಸುವ ಕಲಾಕೃತಿಗಳು ಕಲಾವಿದರ ಕುಂಚದಿಂದ ಅರಳಲಿ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎಸ್.ಮುರುಗನ್ ಆಶಯ ವ್ಯಕ್ತಪಡಿಸಿದ್ದಾರೆ.
ಅವರು ಆಳ್ವಾಸ್ ವಿರಾಸತ್ 2015 ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ ಐದು ದಿನಗಳ ಕಾಲ ವಿದ್ಯಾಗಿರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸಮಕಾಲೀನ ಚಿತ್ರಕಲಾ ಶಿಬಿರ ‘ಆಳ್ವಾಸ್ ವರ್ಣವಿರಾಸತ್-2015’ನ್ನು ಉದ್ಘಾಟಿಸಿ ಮಾತನಾಡಿದರು.

ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಆಳ್ವಾಸ್ ಶಿಕ್ಷಣದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಸಲಹಾ ಸಮಿತಿಯ ಪದಾಧಿಕಾರಿಗಳಾದ ಗಣೇಶ್ ಸೋಮಯಾಜಿ, ಪುರುಷೋತ್ತಮ ಅಡ್ವೆ ಉಪಸ್ಥಿತರಿದ್ದರು.