ಕರ್ನಾಟಕ

ಮಂಡ್ಯದಲ್ಲಿ ಮುಂದುವರೆದ ಅನ್ನದಾತನ ಆತ್ಮಹತ್ಯೆ : ಇಂದು ಇಬ್ಬರು ನೇಣಿಗೆ ಶರಣು

Pinterest LinkedIn Tumblr

raitaಮಂಡ್ಯ, ಜ.9-ಮಂಡ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ  ಮುಂದುವರೆದಿದೆ. ಸಾಲಬಾಧೆ ತಾಳಲಾರದೆ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ವಳಗೆರೆಹಳ್ಳಿ ನಾಥಪ್ಪ (52) ಎಂಬ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ತಾಲೂಕಿನ ಸಾದೊಳಲು ಗ್ರಾಮದಲ್ಲಿ ತನ್ನ ಜಮೀನಿನಲ್ಲಿ ಶಿವಲಿಂಗಯ್ಯ (55) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನಗಿದ್ದ ಒಂದೂವರೆ ಎಕರೆ ಜಮೀನಿನಲ್ಲಿ ಭತ್ತ-ಕಬ್ಬು -ರೇಷ್ಮೆ ಬೆಳೆಯುತ್ತಿದ್ದ ನಾಥಪ್ಪ ಅವರು, ಬ್ಯಾಂಕ್ ಹಾಗೂ ಕೈಸಾಲ ಸೇರಿದಂತೆ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದ್ದೂರು ತಾಲೂಕಿನ ಸಾದೊಳಲು ಗ್ರಾಮದ ರೈತ ಶಿವಲಿಂಗಯ್ಯ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ತಮಗಿದ್ದ 30 ಕುಂಟೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

Write A Comment