ಕರ್ನಾಟಕ

ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ : ಕಾಲಾವಧಿ ವಿಸ್ತರಣೆ ಸಂಚಾರಿ ಪೊಲೀಸರಿಗೆ ಬಿಟ್ಟಿದ್ದು

Pinterest LinkedIn Tumblr

savariಬೆಂಗಳೂರು, ಜ.16-ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಆದರೆ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ಜಾಗೃತಿ ಮೂಡಿಸಿ ಮತ್ತಷ್ಟು  ಕಾಲಾವಕಾಶ ನೀಡುವ ಕುರಿತಂತೆ ಪರಿಶೀಲಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಯವನಿಕಾದಲ್ಲಿಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಲ್ಮೆಟ್ ಧರಿಸುವ ಸಂಬಂಧ ಮತ್ತಷ್ಟು ಅವಧಿ ವಿಸ್ತರಿಸುವ ಕುರಿತು ಸಂಚಾರಿ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇದಲ್ಲದೆ ರಾಜ್ಯಸರ್ಕಾರ ಐಎಸ್‌ಐ ಮಾರ್ಕ್‌ನ ಹೆಲ್ಮೆಟ್ಟೇ ಧರಿಸಬೇಕೆಂದು ಎಲ್ಲೂ ಹೇಳಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದ್ದೇವೆ ಹೊರತು, ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Write A Comment