ಕರ್ನಾಟಕ

ಮೋದಿ ಹತ್ಯೆಗೆ ಸಂಚು ನಡೆಸಿದ್ದರ ಮಾಹಿತಿ ಇಲ್ಲ: ಸಿದ್ದು

Pinterest LinkedIn Tumblr

cmಮೈಸೂರು:  ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ರಾಜ್ಯ ಭೇಟಿ ವೇಳೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ ಶಂಕಿತ ಉಗ್ರರನ್ನು ಎನ್‌ಐಎ ತಂಡ ಬಂಧಿಸಿದೆ. ಈ ವಿಚಾರದಲ್ಲಿ ರಾಜ್ಯದ ಪೊಲೀಸರು ಎನ್‌ಐಎಗೆ ಸಹಕಾರ ನೀಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ರಾಜ್ಯ ಭೇಟಿ ವೇಳೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬಿಜೆಪಿಯವರ ಮಾತಿನಲ್ಲೇ ಅವರ ಸಂಸ್ಕೃತಿ ತಿಳಿಯುತ್ತದೆ ಎಂದು ಟೀಕಿಸಿದರು.
-ಉದಯವಾಣಿ

Write A Comment