ರಾಷ್ಟ್ರೀಯ

ನೇತಾಜಿ ಮೊಮ್ಮಗ ಬಿಜೆಪಿ ಸೇರ್ಪಡೆ

Pinterest LinkedIn Tumblr

netajiಹೌರಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಬೋಸ್ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕೊಲ್ಕಾತದ ಹೌರಾ ಜಿಲ್ಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಚಂದ್ರ ಬೋಸ್ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ನೇತಾಜಿಗೆ ಸಂಬಂಧಪಟ್ಟ ದಾಖಲೆಗಳನ್ನು ಕೇಂದ್ರ ಸರ್ಕಾರ ಬಹಿರಂಗ ಪಡಿಸಿದ ಬೆನ್ನಲ್ಲೇ ಅವರ ಸೋದರ ಸಂಬಂಧಿ ಮೊಮ್ಮಗ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನೇತಾಜಿ ಬದುಕಿಗೆ ಸಂಬಂಧಿಸಿದಂತೆ ಮಾಹಿತಿ ಬಹಿರಂಗ ಪಡಿಸಲು ಯಾವುದೇ ಸರ್ಕಾರ ಮುಂದೆ ಬಂದಿರಲಿಲ್ಲ. ಆದರೆ, ಬಿಜೆಪಿ ಅಂತಹ ಕಾರ್ಯ ಮಾಡಿದೆ. ಹಾಗಾಗಿ, ನಾನು ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಚಂದ್ರ ಬೋಸ್ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಸಿದ್ಧಾಂತವನ್ನು ಒರೆಸು ಹಾಕುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಚಂದ್ರ ಬೋಸ್ ಅವರು ಚುನಾವಣೆ ವೇಳೆ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಚಾರ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.

Write A Comment