ಕೊಪ್ಪಳ, ಜ. ೨೬- ಅಧಿಕಾರಿಗಳ ಎಡವಟ್ಟು, ಬೇಜವಾಬ್ದಾರಿ, ನಿರ್ಲಕ್ಷ್ಯದಿಂದಾಗಿ ರಾಷ್ಟ್ರಧ್ವಜ ಹಾರಾಡದೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇಂದು ಬೆಳಿಗ್ಗೆ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ನಡೆದ ದಿನಾಚರಣೆ ವೇಳೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಧ್ವಜಸ್ತಂಭಕ್ಕೆ ಕಟ್ಟಿದ್ದ ಹಗ್ಗವನ್ನು ಹಲವಾರು ಬಾರಿ ಎಳೆದರೂ ಧ್ವಜ ಬಿಚ್ಚಿಕೊಳ್ಳಲಿಲ್ಲ.
ಪೊಲೀಸ್ ಸಿಬ್ಬಂದಿಗಳು ಹಾಗೂ ಧ್ವಜ ಕಟ್ಟಿದ್ದ ಸಿಬ್ಬಂದಿಗಳು ಎಷ್ಟೇ ಪ್ರಯತ್ನ ಮಾಡಿದರೂ ಧ್ವಜ ಬಿಚ್ಚಿಕೊಂಡು ಹಾರಾಡಲಿಲ್ಲ. ಇದರಿಂದ ಜಿಲ್ಲಾಧಿಕಾರಿಗಳು ಮುಜುಗರವನ್ನು ಎದುರಿಸಬೇಕಾಯಿತು.
ನಂತರ ಸಿಬ್ಬಂದಿಗಳು ಧ್ವಜವನ್ನು ಕೆಳಗೆ ಇಳಿಸಿ ಮತ್ತೆ ಧ್ವಜಾರೋಹಣ ನೆರವೇರಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿ ಪ್ರತಿದಿನ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಆದರೂ ಗಣರಾಜ್ಯೋತ್ಸವ ದಿನದಂದೆ ಧ್ವಜ ಹಾರಾಡದೆ ಇದ್ದುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ